ಜುಲೈ ಮೂರನೇ ವಾರದಲ್ಲಿ ಪಿಯುಸಿ, ಆಗಸ್ಟ್ ಮೊದಲ ವಾರದಲ್ಲಿ ಎಸ್ಸೆಸೆಲ್ಸಿ ಫಲಿತಾಂಶ

ಬೆಂಗಳೂರು: ಕೊರೋನಾ ಆತಂಕದ ನಡುವೆಯೇ ಎಸ್ಸೆಸೆಲ್ಸಿ ಪರೀಕ್ಷೆ ನಡೆದಿದೆ. ಈ ಸಂಕಟ ಪರಿಸ್ಥಿತಿಯಲ್ಲಿ ಯಾವ ವಿದ್ಯಾರ್ಥಿಗೂ ತೊಂದರೆಯಾಗಬಾರದೆಂಬ ಉದ್ದೇಶದಿಂದ ಸೂಕ್ತ ಎಚ್ಚರಿಕೆಯ ಕ್ರಮಕ್ಕೆ ಸೂಚಿಸಿರುವ ಶಿಕ್ಷಣ ಸಚಿವ ಸುರೇಶ ಕುಮಾರ್ ತಾವೇ ಖುದ್ದಾಗಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಗಮನ ಸೆಳೆದಿದ್ದಾರೆ.

ಇಂದು ಸಚಿವರು ಆನೇಕಲ್ ತಾಲೂಕಿನ ಅತ್ತಿಬೆಲೆ, ದೊಮ್ಮಸಂದ್ರ ಚಂದಾಪುರ, ಸರ್ಜಾಪುರ ಮೊದಲಾದೆಡೆ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ ಮೂರನೇ ವಾರದಲ್ಲಿ ಪಿಯುಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದರು. ಆಗಸ್ಟ್ ಮೊದಲ ವಾರದಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶವನ್ನು ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದರು. ಪ್ರಸ್ತುತ ಪರೀಕ್ಷೆಯಿಂದ ಹೊರಗುಳಿದಿದ್ದ ಕೆಲವು ಮಕ್ಕಳಿಗೆ ಆಗಸ್ಟ್ ತಿಂಗಳ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡಲಾಗುವುದು ಎಂದು ಅವರು ಭರವಸೆ ಬೇಡಿದರು.

Related posts