ಸುರೇಶ ಅಂಗಡಿ ನಿಧನಕ್ಕೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸಂತಾಪ

ಬೆಂಗಳೂರು: ಕೇಂದ್ರ ಸಚಿವ ಸುರೇಶ ಅಂಗಡಿ ನಿಧನಕ್ಕೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ದುಃಖ ವ್ಯಕ್ತಪಡಿಸಿದ್ದಾರೆ.

ಸತತವಾಗಿ ನಾಲ್ಕು ಬಾರಿ ಸಂಸದರಾಗಿದ್ದ, ನನ್ನ ಆತ್ಮೀಯ ಸ್ನೇಹಿತರೂ, ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಶ್ರೀ ಸುರೇಶ್ ಅಂಗಡಿಯವರ ನಿಧನದಿಂದ ನನ್ನ ಮನಸ್ಸಿಗೆ ತುಂಬಾ ‌ನೋವುಂಟಾಗಿದೆ ಎಂದವರು ಹೇಳಿದ್ದಾರೆ.

ಕಾನೂನು ಪದವೀಧರರಾಗಿ, ರಾಜಕೀಯದಲ್ಲಿ ಪ್ರವರ್ಧಮಾನಕ್ಕೆ ಬಂದಿದ್ದ, ವಾಣಿಜ್ಯೋದ್ಯಮಿಯಾಗಿದ್ದ ಶ್ರೀಯುತರ ಅಗಲಿಕೆಯಿಂದ ರಾಜ್ಯ ಹಾಗೂ ದೇ‌ಶವು ದೂರದೃಷ್ಟಿಯುಳ್ಳ ಪ್ರಭಾವಿ ರಾಜಕಾರಣಿಯೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

ಇವರ ಆತ್ಮಕ್ಕೆ ಚಿರಶಾಂತಿ ದೊರಕಲೆಂದೂ ಹಾಗೂ ಇವರ ಕುಟುಂಬ ವರ್ಗದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಅವರು ಪ್ರಾರ್ಥಿಸಿದ್ದಾರೆ.

Related posts