ಮಳೆಯಿಂದ ಹೈರಾಣಾದ ಹೈದರಾಬಾದ್; ಸರಣಿ ದುರ್ಘಟನೆಗಳಲ್ಲಿ 32 ಮಂದಿ ಬಲಿ

ಹೈದರಾಬಾದ್: ಭಾರೀ ಮಳೆಯಿಂದಾಗಿ ತೆಲಂಗಾಣ ರಾಜ್ಯ ತತ್ತರಿಸಿದೆ. ಕಳೆದ ಕೆಲ ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಹೈದರಾಬಾದ್ ಮತ್ತು ತೆಲಂಗಾಣ ರಾಜ್ಯಗಳ ಹಲವು ಜಿಲ್ಲೆಗಳಲ್ಲಿ ಪ್ರವಾಹದ ಪರಿಸ್ಥಿತಿ ನಿಮಾನವಾಗಿದೆ. ಮಳೆ ಸಂಬಂಧಿತ ದುರ್ಘಟನೆಗಳಲ್ಲಿ ಹಲವಾರು ಸಾವನ್ನಪ್ಪಿದ್ದಾರೆ.

ಭಾರೀ ಮಳೆಯಿಂದಾಗಿ ಹೈದರಾಬಾದ್ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದ್ದು ಮಳೆ, ಪ್ರವಾಹ ವಿಕೋಪಕ್ಕೆ ಇದುವರೆಗೆ ಮೃತಪಟ್ಟವರ ಸಂಖ್ಯೆ 32ಕ್ಕೇರಿದೆ. ಹೈದರಾಬಾದ್ ನಲ್ಲಿಯೇ 25 ಮಂದಿ ಮೃತಪಟ್ಟಿದ್ದಾರೆ. ಮಹಬೂಬ್ ನಗರ ಜಿಲ್ಲೆಯಲ್ಲಿ 7 ಮಂದಿ ಮೃತಪಟ್ಟಿದ್ದಾರೆ.

ಹೈದರಾಬಾದ್ ನ ಸಮೀಪ 9 ಮಂದಿ ಕಾಣೆಯಾಗಿದ್ದಾರೆ. ಗಂಗನ್ ಪಹಾಡ್ ನಲ್ಲಿ ಮೂವರು ಪ್ರವಾಹದಲ್ಲಿ ಕೊಚ್ಚಿಹೋಗಿದ್ದಾರೆ. ಚಂದ್ರಯಾನಗುಟ್ಟದಲ್ಲಿ ಗೋಡೆ ಕುಸಿದುಬಿದ್ದು 8 ಮಂದಿ ಮೃತಪಟ್ಟಿದ್ದಾರೆ.

Related posts