ಪಂಪ್ ಸೆಟ್ ಮೂಲಕ ಕಾಲುವೆಗಳಿಂದ ಹೊಲಗಳಿಗೆ ನೀರು; ತಪ್ಪಿತಸ್ಥರಿಗೆ ಸರ್ಕಾರ ಎಚ್ಚರಿಕೆ

ಬೆಂಗಳೂರು: ತುಂಗಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಕಾನೂನು ವ್ಯಾಪ್ತಿ ಮೀರಿ ಹೊಲಗಳಿಗೆ ಪಂಪ್ ಸೆಟ್ ಮೂಲಕ ಕಾಲುವೆ ನೀರನ್ನು ಸರಬರಾಜು ಮಾಡಿಕೊಳ್ಳುತ್ತಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ. ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಣಮಿಸಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ತಿಳಿಸಿದ್ದಾರೆ.

ಪಂಪ್ ಸೆಟ್ ಗಳನ್ನು ಅಳವಡಿಸಿ ಕಾಲುವೆಗಳಿಂದ ಹೊಲಗಳಿಗೆ ನೀರು ಹರಿಸುವುದು ಕಾನೂನಿಗೆ ವಿರುದ್ಧವಾಗಿದ್ದು ಇಂಥಹಾ ಪಂಪ್ ಸೆಟ್ ಗಳನ್ನು ಅಳವಡಿಸಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಅವರು ಹೇಳಿದ್ದಾರೆ.

ಕಾನೂನಿಗೆ ವಿರುದ್ಧವಾಗಿ ಪಂಪ್ ಸೆಟ್ ಗಳನ್ನು ಅಳವಡಿಸಿ ನೀರೆತ್ತುವ ಇಂಥಹಾ ಘಟನೆಗಳು ಎಲ್ಲೆಡೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಕುರಿತು ಶೀಘ್ರವಾಗಿ ಉನ್ನತ ಮಟ್ಟದ ಸಭೆ ಕರೆಯುತ್ತೇನೆ ಎಂದಿರುವ ಸಚಿವರು, ತುಂಗಭದ್ರಾ ಎಡದಂಡೆ ಕಾಲುವೆ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆಯನ್ನು ಸ್ಥಗಿತಗೊಳಿಸುವಂತೆ ರೈತರಲ್ಲಿ ಮನವಿ ಮಾಡುತ್ತೇನೆ.

Related posts