ಗ್ರಾಮ ಪಂಚಾಯ್ತಿ ಚುನಾವಣೆಗೆ ಬಿಜೆಪಿ ರಣಕಹಳೆ; ಗ್ರಾಮ ಸ್ವರಾಜ್ಯ ಸಮಾವೇಶ

ಉಡುಪಿ: ಗ್ರಾಮ ಪಂಚಾಯತ್ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸುತ್ತಿರುವ ಬಿಜೆಪಿ, ಇದೀಗ ಗ್ರಾಮ ಸ್ವರಾಜ್ಯ ಸಮಾವೇಶ ನಡೆಸುತ್ತಿದೆ. ಉಡುಪಿಯ ಅಂಬಾಗಿಲು ಅಮೃತ್ ಗಾರ್ಡನ್ ನಲ್ಲಿ ನಡೆದ ಗ್ರಾಮ ಸ್ವರಾಜ್ಯ ಸಮಾವೇಶದಲ್ಲಿ ಸಾವಿರಾರು ಮಂದಿ ಭಾಗವಹಿಸಿದರು.

ಸಮಾವೇಶದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮೋದಿ ಸರ್ಕಾರದ ಸಾಧನೆಗಳತ್ತ ಬೆಳಕು ಚೆಲ್ಲಿದರು. ರಾಜ್ಯ ಸರ್ಕಾರವೂ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಬಾರಿಯ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಬೆಂಬಲಿತರನ್ನು ಗೆಲ್ಲಿಸಬೇಕೆಂದು ಅವರು ಕಾರ್ಯಕರ್ತರಿಗೆ ಕರೆ ನೀಡಿದರು.

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಸಂಸದರಾದ ಮುನಿಸ್ವಾಮಿ, ಶೋಭಾ ಕರಂದ್ಲಾಜೆ, ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್, ಶಾಸಕರಾದ ಉಮಾನಾಥ್ ಕೋಟ್ಯಾನ್, ಲಾಲಾಜಿ ಆರ್. ಮೆಂಡನ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿ ಮೊದಲಾದ ನಾಯಕರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

Related posts