ಕಡಲತಡಿಯಲ್ಲಿ ವಾಟರ್ ಸ್ಪೋರ್ಟ್ಸ್ ತರಬೇತಿ ಕೇಂದ್ರ; ಶಾಸಕರಿಂದ ಸ್ಥಳ ಪರಿಶೀಲನೆ

ಉಡುಪಿ: ಪಡುಕೆರೆ ಭಾಗದಲ್ಲಿ ವಾಟರ್ ಸ್ಪೋರ್ಟ್ಸ್ ತರಬೇತಿ ಕೇಂದ್ರ ಸ್ಥಾಪನೆಯಾಗಲಿದೆ. ವಾಟರ್ ಸ್ಪೋರ್ಟ್ಸ್ ತರಬೇತಿ ಕೇಂದ್ರ ಸ್ಥಾಪನೆ ಸಂಬಂಧ ಪ್ರಕ್ರಿಯೆಗಳು ಸಾಗಿದ್ದು ಶಾಸಕ ಕೆ. ರಘುಪತಿ ಭಟ್ ಅವರು ಸ್ಥಳ ಪರಿಶೀಲನೆ ನಡೆಸಿದರು.

ಪಡುಕೆರೆ ಪ್ರದೇಶಕ್ಕೆ ಶನಿವಾರ ಭೇಟಿ ನೀಡಿದ ಶಾಸಕರಿಗೆ ಅಧಿಕಾರಿಗಳು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಅಂಬಲಪಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪ್ರಮೋದ್ ಕೆ ಸಾಲ್ಯಾನ್, ಯುವಜನ ಸಬಲೀಕರಣ ಕ್ರೀಡಾ ಇಲಾಖೆಯ ಆಯುಕ್ತ ಶ್ರೀನಿವಾಸ್, ನಗರಸಭೆ ಪೌರಾಯುಕ್ತ ಉದಯ್ ಕುಮಾರ್ ಶೆಟ್ಟಿ, ಯುವಜನ ಸಬಲೀಕರಣ ಸಹಾಯಕ ನಿರ್ದೇಶಕ ರೋಷನ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Related posts