ಅಮೆರಿಕಾಗೆ ನೂತನ ಸಾರಥಿ; ಅಧ್ಯಕ್ಷರಾಗಿ ಜೋ ಬೈಡೆನ್ ಪದಗ್ರಹಣ

ವಾಷಿಂಗ್ಟನ್: ಅಮೆರಿಕದ 46ನೇ ಅಧ್ಯಕ್ಷರಾಗಿ ಜೋ- ಬೈಡೆನ್ ಅಧಿಕಾರ ಸ್ವೀಕರಿಸಿದ್ದಾರೆ. ಇದೇ ವೇಳೆ, ಉಪಾಧ್ಯಕ್ಷೆಯಾಗಿ ಕಮಲಾ ಹ್ಯಾರಿಸ್ ಪದಗ್ರಹಣ ಮಾಡಿದ್ದಾರೆ.

ಯುಎಸ್ ಕ್ಯಾಪಿಟಲ್ ನಲ್ಲಿ ನಡೆದ ಸಮಾರಂಭದಲ್ಲಿ ನೂತನ ಅಧ್ಯಕ್ಷ ಜೋ- ಬೈಡೆನ್ ಅವರಿಗೆ ಅಮೆರಿಕ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ರಾಬರ್ಟ್ ಜಾನ್ಸ್ ಪ್ರಮಾಣ ವಚನ ಬೋಧಿಸಿದರು. ಪ್ರಮಾಣ ವಚನ ಸ್ವೀಕರಿಸಿ, ಅಧಿಕಾರ ವಹಿಸಿಕೊಂಡ ಬೈಡೆನ್, ಪ್ರಜಾತಂತ್ರದ ಗೆಲುವಿನ ಮೂಲಕ ನಾನು ಅಧಿಕಾರವಹಿಸಿಕೊಂಡಿದ್ದೇನೆ ಎಂದರು. ದೇಶದ ಮುಂದೆ ಹಲವಾರು ಸವಾಲುಗಳಿದ್ದು, ಒಗ್ಗಟ್ಟಾಗಿ ಸವಾಲನ್ನು ಎದುರಿಸೋಣ ಎಂದರು.

ಇದೇ ವೇಳೆ, ಉಪಾಧ್ಯಕ್ಷೆಯಾಗಿ ಕಮಲಾ ಹ್ಯಾರಿಸ್ ಪದಗ್ರಹಣ ಮಾಡಿದ್ದಾರೆ. ಅಮೆರಿಕಾದ ಇತಿಹಾಸದಲ್ಲಿಮೊದಲೆಂಬಂತೆ ಉಪಾಧ್ಯಕ್ಷೆಯಾಗಿ ಕಮಲಾ ಹ್ಯಾರಿಸ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Related posts