ನಾಗಠಾಣಾದಲ್ಲಿ ಜನಸಂಪರ್ಕ ಸಭೆ: ಪಕ್ಷ ಬಲವರ್ಧನೆ ಗೆ ಶ್ರಮಿಸಲು ಡಿಸಿಎಂ ಕಾರಜೋಳ ಕರೆ

ವಿಜಯಪುರ: ನಾಗಠಾಣ ವಿಧಾನ ಸಭಾ ಕ್ಷೇತ್ರದ ಉಮರಾಣಿ ಗ್ರಾಮದಲ್ಲಿ ಬಿಜೆಪಿ ಪಕ್ಷವು ಏರ್ಪಡಿಸದ್ದ ಜನಸಂಪರ್ಕ ಸಭೆಯಲ್ಲಿ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ಭಾಗವಹಿಸಿ ಕಾರ್ಯಕರ್ತರಿಗೆ ಪಕ್ಷ ಸಂಘಟನೆಯ ಮಂತ್ರ ಬೋಧಿಸಿದರು.

ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಬಿಜೆಪಿ ನೇತೃತ್ವದ ಸರ್ಕಾರವು ಅಪರಿಮಿತವಾಗಿ ಶ್ರಮಿಸುತ್ತಿದೆ. ಪಕ್ಷ ಬಲವರ್ಧನೆಗೆ ಎಲ್ಲಾ ಕಾರ್ಯಕರ್ತರು ಒಗ್ಗೂಡಿ ಶ್ರಮಿಸಬೇಕು ಎಂದರು.

ಇತ್ತೀಚಿಗೆ ನಡೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ನೂತನ ಸದಸ್ಯರೆಲ್ಲರೂ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ಹಾಗೂ ಪಕ್ಷದ ಸಂಘಟನೆಗೆ ಶ್ರಮಿಸಬೇಕು ಎಂದು ಮಾರ್ಗದರ್ಶನ ಮಾಡಿದರು.

ಸಂಸದರಾದ ರಮೇಶ್ ಜಿಗಜಿಣಗಿ , ತಾಲ್ಲೂಕುಪಂಚಾಯಿತಿ ಸದಸ್ಯರು, ಪಕ್ಷದ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Related posts