ವಿಜಯಪುರದ ವಿಮಾನ ನಿಲ್ದಾಣಕ್ಕೆ ಕೆಲವೇ ದಿನಗಳಲ್ಲಿ ಭೂಮಿ ಪೂಜೆ

ಧಾರವಾಡ: ವಿಜಯಪುರದ ವಿಮಾನ ನಿಲ್ದಾಣಕ್ಕೆ ಕೆಲವೇ ದಿನಗಳಲ್ಲಿ ಭೂಮಿ ಪೂಜೆ ನೆರವೇರಲಿದೆ. ಗ್ರಾಮ ಪಂಚಾಯತ್ ಚುನಾವಣೆ ನೀತಿ ಸಂಹಿತೆ ಮುಕ್ತಾಯವಾದ ಕೂಡಲೇ ಭೂಮಿಪೂಜೆ ನೆರವೇರಿಸಲು ಸರ್ಕಾರ ತೀರ್ಮಾನಿಸಿದೆ. ವಿಜಯಪುರ ನಗರದ ಹೊರ ವಲಯದಲ್ಲಿ ಸುಮಾರು 220 ಕೋಟಿ ರೂಪಾಯಿ ವೆಚ್ಚದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ.

ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಈ ಕುರಿತು ಮಾಹಿತಿ ಹಂಚಿಕೊಂಡ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗ್ರಾಮ ಪಂಚಾಯತ್ ಚುನಾವಣೆ ನೀತಿ ಸಂಹಿತೆ ಮುಕ್ತಾಯವಾದ ಕೂಡಲೇ ಭೂಮಿಪೂಜೆ ನೆರವೇರಿಸಲಾಗುವುದು ಎಂದು ತಿಳಿಸಿದರು.

ಈ ವಿಮಾನ ನಿಲ್ದಾಣ ಅಭಿವೃದ್ಧಿಯಿಂದ ಉತ್ತರ ಕರ್ನಾಟಕದ ಹುಬ್ಬಳ್ಳಿ ಹಾಗೂ ಬೆಳಗಾವಿ ವಿಮಾನ ನಿಲ್ದಾಣಗಳ ಮೇಲಿನ ಅವಲಂಬನೆ ಕಡಿಮೆಯಾಗಲಿದೆ ಹಾಗೂ ವಿಜಯಪುರ ಭಾಗದ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಹೇಳಿದರು

Related posts