ಬಂದವರಿಗೂ ಹರಸಿದವರಿಗೂ ಕೃತಜ್ಞತೆ ಸಲ್ಲಿಸಿದ ಡಾಲಿ
ಬೆಂಗಳೂರು: ಹಸಮಾನೇ ಏರಿ ಹೊಸ ಬದುಕು ಆರಂಭಿಸಿರುವ ನಟ ಡಾಲಿ ಧನಂಜಯ ಮತ್ತು ಪತ್ನಿ ಅವರು ಅಭಿಮಾನಿಗಳ ಮುಂದೆ ಪ್ರತ್ಯಕ್ಷರಾಗಿದ್ದಾರೆ. ನವ ವಿವಾಹಿತರನ್ನು ಕಂಡು ಅಭಿಮಾನಿ ಬಂದುಗಳು ಸಂತಸಗೊಂಡಿದ್ದಾರೆ. ಈ ಫೋಟೋಗಳನ್ನು ಹಂಚಿಕೊಂಡಿರುವ ನಟ ಡಾಲಿ ಧನಂಜಯ ಮದುವೆಗೆ ಬಂದು ಹರಸಿದ, ಬರಲಾಗದೆ ಇದ್ದರು ಶುಭಾಶಯಗಳನ್ನು ತಿಳಿಸಿದ ಎಲ್ಲರಿಗೂ ಹೃದಯಪೂರ್ವಕ ನಮನಗಳು ಎಂದಿದ್ದಾರೆ. ಯಾವುದೇ ತೊಂದರೆ ಆಗದೆ ಸಮಾರಂಭ ಚೆನ್ನಾಗಿ ಆಗುವಲ್ಲಿ ಕುಟುಂಬದ ಜೊತೆ ಸ್ನೇಹಿತರು, ನೆಂಟರು,...