ವರ್ಗಾವಣೆ ದಂಧೆಯಲ್ಲಿ ಸರಕಾರ ಮುಳುಗೇಳುತ್ತಿದೆ; ಕುಮಾರಸ್ವಾಮಿ ಆರೋಪ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಮೇಲೆ ಹೊಸದಾಗಿ ವೈಎಸ್ ಟಿ (YST) ತೆರಿಗೆ ಆರಂಭವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ವೈಎಸ್ ಟಿ ಎಂದರೆ ಏನು? ಸ್ವಲ್ಪ ಬಿಡಿಸಿ ಹೇಳಿ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮಧ್ಯರಾತ್ರಿವರೆಗೂ ತಮ್ಮ ಮನೆಗಳಲ್ಲಿ ಅಧಿಕಾರಿಗಳ ಸಭೆ...