ಅಪ್ಘಾನಿಸ್ತಾನದಲ್ಲಿ ಸರಣಿ ಭೂಕಂಪ: 2000ಕ್ಕೂ ಹೆಚ್ಚು ಮಂದಿ ಸಾವು

ಕಾಬೂಲ್ : ಪಶ್ಚಿಮ ಅಪ್ಘಾನಿಸ್ತಾನದಲ್ಲಿ ಸಂಭವಿಸಿದ ಸರಣಿ ಭೂಕಂಪದಲ್ಲಿ ಕನಿಷ್ಠ 2000 ಮಂದಿ ಸಾವನ್ನಪ್ಪಿದ್ದಾರೆ.

ಹೆರಾತ್‌ನಲ್ಲಿ ಭೂಕಂಪನ ಕೇಂದ್ರಬಿಂದು ಪತ್ತೆಯಾಗಿದೆ. ಜಿಂದಾ ಜಾನ್ ಮತ್ತು ಘೋರಿಯನ್ ಜಿಲ್ಲೆಗಳ 12 ಹಳ್ಳಿಗಳು ಸಂಪೂರ್ಣವಾಗಿ ನಾಶವಾಗಿವೆ. ಭೂಕಂಪದಿಂದಾಗಿ ಸಾವಿರಾರು ಕಟ್ಟಡಗಳು ಧರೆಗುರುಳಿದ್ದು. ನೂರಾರು ಜನ ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದು, ಅವರ ರಕ್ಷಣೆಗೆ ಕಾರ್ಯಾಚರಣೆ ಸಾಗಿದೆ. ಸಾವಿರಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

https://twitter.com/TalibanPRD__/status/1710877617828565234

ಈ ಕುರಿತಂತೆ ವಿಶ್ವಸಂಸ್ಥೆ ಮಾಹಿತಿ ನೀಡಿದ್ದು, ಕಟ್ಟಡಗಳ ಅವಶೇಷಗಳಡಿ ಹಲವರು ಸಿಲುಕಿರುವುದರಿಂದ ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Related posts