ಗದಗ: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಆಪರೇಷನ್ ಹಸ್ತಕ್ಕೆ ರಹಸ್ಯ ತಂತ್ರಗಾರಿಕೆ ನಡೆದಿದ್ದು ಮಾಜಿ ಶಾಸಕ ರಾಮಣ್ಣ ಲಮಾಣಿ ಅವರು ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಅಕ್ಟೋಬರ್ 10 ರಂದು ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಅವರು ತಿಳಿಸಿದ್ದಾರೆ.
ಗದಗ್ ಜಿಲ್ಲೆ ಕುಂದ್ರಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಣ್ಣ ಲಮಾಣಿ, ತಾವು ಬಿಜೆಪಿಗೆ ರಾಜೀನಾಮೆ ನೀಡುತ್ತಿದ್ದೇನೆ. ಅಕ್ಟೋಬರ್ 10 ರಂದು ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ ಎಂದುಪ್ರಕಟಿಸಿದರು.
ಬಿಜೆಪಿಯಲ್ಲಿ ಎರಡು ಬಾರಿ ಶಾಸಕನಾಗಿ ಶಿರಹಟ್ಟಿ ಮುಂಡರಗಿ ಹಾಗೂ ಲಕ್ಷ್ಮೇಶ್ವರ ತಾಲೂಕುಗಳಲ್ಲಿ ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಆದರೆ ಕಳೆದ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಲಿಲ್ಲ. ನಾಯಕರ ನಡೆಯಿಂದ ಬೇಸರಗೊಂಡು ತಾವು ಪಕ್ಷ ತೊರೆಯುವ ನಿರ್ಧಾರ ಕೈಗೊಂಡಿದ್ದಾಗಿ ಅವರು ತಿಳಿಸಿದರು.