ಬೆಂಗಳೂರು: ಕರ್ನಾಟಕ ಉಪಚುನಾವಣೆಯ ಟಿಕೆಟ್ ಹಂಚಿಕೆ ಕುರಿತಿದ್ದ ಕಗ್ಗಂಟಿಗೆ ಕಾಂಗ್ರೆಸ್ ಕೊನೆಗೂ ತೆರೆ ಎಳೆದಿದೆ. ಏಪ್ರಿಲ್ 9ರಂದು ನಡೆಯಲಿರುವ ರಾಜ್ಯದ ಎರಡು ಪ್ರಮುಖ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ತನ್ನ ಅಧಿಕೃತ ಅಭ್ಯರ್ಥಿ ಪಟ್ಟಿಯನ್ನು ಇಂದು ಭಾನುವಾರ ಬಿಡುಗಡೆ ಮಾಡಿದೆ.
ದಾವಣಗೆರೆ ದಕ್ಷಿಣದಿಂದ ಸಮರ್ಥ್ ಮಲ್ಲಿಕಾರ್ಜುನ್ ಹಾಗೂ ಬಾಗಲಕೋಟೆಯಿಂದ ಉಮೇಶ್ ಮೇಟಿ ಇವರಿಗೆ ಟಿಕೆಟ್ ನೀಡಲಾಗಿದೆ ಎಂದು ಪಕ್ಷದ ಮೂಲಗಳು ದೃಡಪಡಿಸಿವೆ.
ಉಪಚುನಾವಣೆಯ ಸನ್ನಾಹದಲ್ಲಿ ಕಾಂಗ್ರೆಸ್ ಈ ಬಾರಿ ಜಾಗರೂಕ ನಡೆ ತೆಗೆದುಕೊಂಡಿದ್ದು, ಎರಡೂ ಕ್ಷೇತ್ರಗಳಲ್ಲಿ ಗಟ್ಟಿಯಾದ ಸ್ಪರ್ಧೆಗೆ ತಯಾರಾಗಿದೆ ಎಂಬುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

