ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಕೇಸ್ ದಾಖಲಾಗಿದೆ. ಆರ್‌ಸಿಬಿ, ಡಿಎನ್‌ಎ ಎಂಟರ್‌ಟೈನ್‌ಮೆಂಟ್ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್‌ಸಿಎ) ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಕಾಲ್ತುಳಿತದಲ್ಲಿ ಗಾಯಗೊಂಡ ರೋಹನ್ ಗೋಮ್ಸ್ ಅವರು ಜೂನ್ 5 ರಂದು ನೀಡಿರುವ ದೂರಿನ ಆಧಾರದಲ್ಲಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.