‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾ ಈಗ ಬಿಡುಗಡೆಗೆ ಸಿದ್ಧ

ಕನ್ನಡ ಚಿತ್ರರಂಗದಲ್ಲಿ ನಿರೀಕ್ಷೆ ಹುಟ್ಟಿಸಿರುವ ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾ ಈಗ ಬಿಡುಗಡೆಗೆ ಸಿದ್ಧವಾಗಿದೆ. ಡಾರ್ಲಿಂಗ್​ ಕೃಷ್ಣ ನಟಿಸಿರುವ ಈ ಸಿನಿಮಾ ಜುಲೈ 28ರಂದು ಈ ಚಿತ್ರ ತೆರೆಕಾಣಲಿದೆ ಎಂದು ನಿರ್ದೇಶಕ ಶಶಾಂಕ್​ ಪ್ರಕಟಿಸಿದ್ದಾರೆ.

ಈ ಸಿನಿಮಾದಲ್ಲಿ ಡಾರ್ಲಿಂಗ್​ ಕೃಷ್ಣ ಅವರಿಗೆ ಜೋಡಿಯಾಗಿ ಬೃಂದಾ ಆಚಾರ್ಯ ನಟಿಸಿದ್ದಾರೆ. ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಸಕತ್ ಲೈಕ್ಸ್ ಗಿಟ್ಟಿಸಿಕೊಂಡಿರುವ ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದ ಹಾಡುಗಳು ಈ ಸಿನಿಮಾ ಬಗ್ಗೆ ನಿರೀಕ್ಷೆ ಹುಟ್ಟಿಸಿರುವುದು.

Related posts