ಗೃಹಜ್ಯೋತಿ’ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭ; ನಾಗರಿಕರು ಗಮನಿಸಬೇಕಾದ ಸಂಗತಿಗಳು ಇವು..

ಬೆಂಗಳೂರು: ರಾಜ್ಯದ ಪ್ರತಿ ಮನೆಗಳಿಗೆ ಉಚಿತ ವಿದ್ಯುತ್ ಪೂರೈಸುವ ‘ಗೃಹಜ್ಯೋತಿ’ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಗೊಂಡಿದೆ.

  • ಅರ್ಜಿದಾರರು ಸೇವಾಸಿಂಧು ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಬೇಕು. ಮೊಬೈಲ್‌, ಕಂಪ್ಯೂಟರ್, ಲ್ಯಾಪ್‌ಟಾಪ್‌ಗಳಲ್ಲಿ ಅರ್ಜಿ ಹಾಕಬಹುದು.

  • ಆಧಾರ್‌ ಸಂಖ್ಯೆ, ವಿದ್ಯುತ್ ಖಾತೆ ಸಂಖ್ಯೆ, ಮೊಬೈಲ್‌ ಸಂಖ್ಯೆ ನಮೂದಿಸಬೇಕು.

  • ಗೊಂದಲ ಇದ್ರೆ ಸಹಾಯವಾಣಿ 1912ಗೆ ಕರೆ ಮಾಡಬಹುದು.ವಿದ್ಯುತ್​ಶಕ್ತಿ ಕಚೇರಿಯಲ್ಲೂ ಮಾಹಿತಿ ಪಡೆಯಬಹುದು

  • ಬಾಡಿಗೆದಾರರು ಅರ್ಜಿ ಸಲ್ಲಿಸುವಾಗ ಬಾಡಿಗೆ ಮನೆಗೆ ಸಂಬಂಧಿಸಿದ ದಾಖಲೆ ಇರಬೇಕು. ಬಾಡಿಗೆ ಮನೆಯಲ್ಲಿ ಇರುವವರು ಉಚಿತ ವಿದ್ಯುತ್‌ಗಾಗಿ ಅಗತ್ಯ ದಾಖಲೆ ಸಲ್ಲಿಸಬೇಕು.

  • ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ನಾಡ ಕಚೇರಿ, ಗ್ರಾ.ಪಂ. ಕಚೇರಿ, ವಿದ್ಯುತ್​ ಕಚೇರಿಗಳಲ್ಲೂ ನೋಂದಾಯಿಸಬಹುದು.

Related posts