ಜಿ20 ಶೃಂಗಸಭೆ: ವಿಶ್ವದ ದಿಗ್ಗಜರಿಂದ ಮಹಾತ್ಮಾ ಗಾಂಧಿ ಸ್ಮಾರಕಕ್ಕೆ ನಮನ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆ ಜಗತ್ತಿನ ವಿವಿಧ ರಾಷ್ಟ್ರಗಳ ದಿಗ್ಗಜ ನಾಯಕರ ಸಮಾಗಮಕ್ಕೆ ಸಾಕ್ಷಿಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾನುವಾರವಾದ ಇಂದೂ ಕೂಡ ವಿಶ್ವ ನಾಯಕರ ನಡುವೆ ಚಿಂತನ-ಮಂಥನ ನಡೆದಿದ್ದು ಅದಕ್ಕೂ ಮುನ್ನ ಬೆಳಗ್ಗೆ ವಿವಿಧ ದೇಶಗಳ ಪ್ರತಿನಿಧಿಗಳು ದೆಹಲಿಯ ರಾಜ್ ಘಾಟ್ ಗೆ ತೆರಳಿ ಮಹಾತ್ಮಾ ಗಾಂಧಿ ಸ್ಮಾರಕಕ್ಕೆ ನಮನ ಸಲ್ಲಿಸಿದರು.

ಪ್ರಧಾನಿ ನರೇಂದ್ರ ಮೋದಿ ಉಪಸ್ಥಿತಿಯಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಸಿಂಗಾಪುರದ ಪ್ರಧಾನಿ ಲೀ ಸಿಯೆನ್ ಲೂಂಗ್, ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನೌತ್, ನೆದರ್ಲ್ಯಾಂಡ್ಸ್ ಪ್ರಧಾನಿ ಮಾರ್ಕ್ ರುಟ್ಟೆ, ಸಹಿತ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts