ಠಾಣೆಯೊಳಗೆ ಇಸ್ಪೀಟ್ ಆಟ; ಐವರು ಪೊಲೀಸರ ಅಮಾನತು

ಬೆಂಗಳೂರು: ಪೊಲೀಸ್ ಠಾಣೆಯೊಳಗೆ ಇಸ್ಪೀಟ್ ಆಡಿದ ಆರೋಪದಲ್ಲಿ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲ್ಲೂಕಿನ ವಾಡಿ ಠಾಣೆಯ ಐವರು ಪೊಲೀಸರನ್ನು ಇಲಾಖೆ ಅಮಾನತು ಮಾಡಿ ಆದೇಶ ಹೊರಡಿಸಿದೆ.
ಸಹಾಯಕ ಸಬ್-ಇನ್ಸ್‌ಪೆಕ್ಟರ್ ಮೊಹಮ್ಮದ್ ಮಿಯಾ, ಹೆಡ್ ಕಾನ್‌ಸ್ಟೆಬಲ್‌ಗಳಾದ ಇಮಾಮ್, ನಾಗರಾಜ್, ಸಾಯಿಬಣ್ಣ, ಕಾನ್‌ಸ್ಟೆಬಲ್ ನಾಗಭೂಷಣ್ ಎಂಬವರು ಅಮಾನತುಗೊಂಡಿರುವ ಪೊಲೀಸರು.

ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು ಅವರು ಈ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

Related posts