ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಉಗ್ರ ಪ್ರತಿಭಟನೆ; ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ

ಧಾರವಾಡ: ವಿವಿಧ ಸರ್ಕಾರಿ ಇಲಾಖೆಗಳ ಖಾಲಿ ಹುದ್ದೆಗಳನ್ನ ತಕ್ಷಣ ಭರ್ತಿ ಮಾಡುವಂತೆ ಆಗ್ರಹಿಸಿ ನಗರದಲ್ಲಿ ಉದ್ಯೋಗಾಕಾಂಕ್ಷಿಗಳು ಬೀದಿಗಿಳಿದು ಉಗ್ರ ಪ್ರತಿಭಟನೆ ನಡೆಸಿದರು.

ಈ ಸಂಬಂಧ ಭಾರತೀಯ ಜನತಾ ಪಕ್ಷ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಆಯೋಜಿಸಲಾಗಿತ್ತು. ಪ್ರತಿಭಟನೆಯ ನಡುವೆ ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಸದಸ್ಯರೂ ಸೇರ್ಪಡೆಗೊಂಡು ಹೋರಾಟ ತೀವ್ರಗೊಳಿಸಿದರು.

ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ತಳ್ಳಿ ಮುನ್ನುಗ್ಗಲು ಯತ್ನಿಸಿದ ಪರಿಣಾಮ, ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ತಳ್ಳಾಟ–ನೂಕಾಟ ನಡೆಯಿತು.

ರಾಜ್ಯ ಸರ್ಕಾರವು ಖಾಲಿ ಹುದ್ದೆಗಳ ಭರ್ತಿಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು, ಯುವಜನರ ಅಸಮಾಧಾನವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು.

Related posts