ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಕಲ್ಲು ತೂರಾಟ

ಬೆಂಗಳೂರು: ಪ್ರತಿಷ್ಠಿತ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಕಲ್ಲು ತೂರಾಟ ನಡೆಸಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಶನಿವಾರ ದಾವಣಗೆರೆ ರೈಲು ನಿಲ್ದಾಣದ ಬಳಿ ಕೆಲವು ಕಿಡಿಗೇಡಿಗಳು ಚಲಿಸುತ್ತಿದ್ದ ರೈಲಿಗೆ ಕಲ್ಲು ತೂರಾಟ ನಡೆಸಿದ್ದಾರೆ.

ರೈಲು ಧಾರವಾಡದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಪರಿಣಾಮವಾಗಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನ ಕಿಟಕಿ ಗಾಜು ಜಖಂಗೊಂಡಿದೆ.

ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನ ಸಿ4 ಕೋಚ್‌ನ ಕಿಟಕಿಯ ಹಲಗೆಗೆ ಹಾನಿಯಾಗಿದೆ. ಯಾವುದೇ ಪ್ರಯಾಣಿಕರು ಗಾಯಗೊಂಡಿಲ್ಲ ಎಂದು ಎಂದು ನೈಋತ್ಯ ರೈಲ್ವೆ ವಲಯದ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಅನೀಶ್ ಹೆಗ್ಡೆ ತಿಳಿಸಿದ್ದಾರೆ.

Related posts