“ನವೆಂಬರ್‌ನಲ್ಲಿ ಬದಲಾವಣೆ ಆಗುತ್ತದೆ ಎನ್ನುವುದು ಸುಳ್ಳು” — ಮಾಜಿ ಸಚಿವ ಕೆ.ಎನ್. ರಾಜಣ್ಣ

ತುಮಕೂರು: “ನವೆಂಬರ್‌ನಲ್ಲಿ ಕ್ರಾಂತಿ ಅಥವಾ ಸರ್ಕಾರ ಬದಲಾವಣೆ ಆಗುತ್ತದೆ ಎನ್ನುವುದು ಸಂಪೂರ್ಣ ಸುಳ್ಳು,” ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಸ್ಪಷ್ಟಪಡಿಸಿದ್ದಾರೆ.

ತುಮಕೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, “ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಐದು ವರ್ಷಗಳ ಅವಧಿ ಪೂರೈಸುತ್ತದೆ. ಬದಲಾವಣೆಯ ಯಾವುದೇ ಸಾಧ್ಯತೆ ಇಲ್ಲ,” ಎಂದರು.

ಅವರು ಮುಂದುವರಿದು, “ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವು ಕಾರ್ಪೊರೇಷನ್, ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸುವ ಉದ್ದೇಶ ಹೊಂದಿದೆ,” ಎಂದರು.

ನವೆಂಬರ್‌ನಲ್ಲಿ ಸರ್ಕಾರದಲ್ಲಿ ಬದಲಾವಣೆ ಅಥವಾ ಕ್ರಾಂತಿ ಆಗಲಿದೆ ಎಂಬ ಕೆಲವು ವದಂತಿಗಳ ಬಗ್ಗೆ ಪ್ರತಿಕ್ರಿಯಿಸಿದ ರಾಜಣ್ಣ, “ಇಂತಹ ಊಹಾಪೋಹಗಳಿಗೆ ಯಾವುದೇ ಆಧಾರವಿಲ್ಲ. ಜನರನ್ನು ತಪ್ಪು ದಾರಿಗೆಳೆವ ಪ್ರಯತ್ನ ಮಾತ್ರ ನಡೆಯುತ್ತಿದೆ,” ಎಂದು ಹೇಳಿದರು.

Related posts