ಹೊಸ ದಿಲ್ಲಿ: ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಅಂಗೀಕರಿಸಿದ ನಾಲ್ಕು ಮಸೂದೆಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಒಪ್ಪಿಗೆ ನೀಡಿದ್ದಾರೆ.
ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಸರ್ಕಾರ ತಿದ್ದುಪಡಿ ಮಸೂದೆಗೆ ದತ್ತಾಂಶ ಸಂರಕ್ಷಣಾ ಕಾಯ್ದೆ, ಜನನ ಮತ್ತು ಮರಣಗಳ ನೋಂದಣಿ ತಿದ್ದುಪಡಿ ಮಸೂದೆ, ಜನ್ ವಿಶ್ವಾಸ್ ನಿಬಂಧನೆಗಳ ತಿದ್ದುಪಡಿ ಮಸೂದೆಗಳನ್ನೂ ಸಂಸತ್ತಿನಲ್ಲಿ ಅಂಗೀಕರಿಸಿ ರಾಷ್ಟ್ರಪತಿಗೆ ಕಳುಹಿಸಲಾಗಿತ್ತು. ಈ ಮಸೂದೆಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ.