ಫಿನ್ ಅಲೆನ್ ಸಿಡಿಲಾಟ: ಡೆಲ್ಲಿ ಕ್ಯಾಪಿಟಲ್ಸ್‌ಗೆ ತವರಿನಲ್ಲಿ ಕೆಕೆಆರ್ ಭರ್ಜರಿ ಸೋಲು

ನವದೆಹಲಿ: ಡೆಲ್ಲಿ ಕ್ಯಾಪಿಟಲ್ಸ್ ತಂಡ ತವರಿನಲ್ಲೇ ಹೀನಾಯ ಸೋಲು ಕಂಡಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಐಪಿಎಲ್ 51ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ ಕೇವಲ 142 ರನ್ ಗಳಿಸಲಷ್ಟೇ ಶಕ್ತವಾಯಿತು.

143 ರನ್‌ಗಳ ಗುರಿ ಬೆನ್ನಟ್ಟಿದ ಕೆಕೆಆರ್ ಆರಂಭದಲ್ಲೇ ನಾಯಕ ಅಜಿಂಕ್ಯ ರಹಾನೆ ವಿಕೆಟ್ ಕಳೆದುಕೊಂಡಿತು. ಅವರು 13 ರನ್ ಗಳಿಸಿ ಔಟಾದರು. ಆದರೆ ನಂತರ ಕ್ರೀಸ್‌ಗೆ ಬಂದ ಫಿನ್ ಅಲೆನ್ ಡೆಲ್ಲಿ ಬೌಲರ್‌ಗಳ ಮೇಲೆ ಆರ್ಭಟಿಸಿದರು.

ಅಲ್ಲೆನ್ ಕೇವಲ 47 ಎಸೆತಗಳಲ್ಲಿ 10 ಸಿಕ್ಸರ್ ಹಾಗೂ 5 ಬೌಂಡರಿಗಳ ನೆರವಿನಿಂದ ಸ್ಫೋಟಕ ಶತಕ ಸಿಡಿಸಿ ಪಂದ್ಯವನ್ನು ಏಕಪಕ್ಷೀಯವಾಗಿಸಿದರು. ಅವರ ಅಬ್ಬರದ ಬ್ಯಾಟಿಂಗ್‌ನಿಂದ ಕೋಲ್ಕತ್ತಾ ನೈಟ್ ರೈಡರ್ಸ್ ಸುಲಭವಾಗಿ ಗುರಿ ತಲುಪಿ ಮಹತ್ವದ ಗೆಲುವು ದಾಖಲಿಸಿತು.

Related posts