ಬೆಂಗಳೂರು: ಕನ್ನಡ ‘ಬಿಗ್ ಬಾಸ್’ ಸ್ಪರ್ಧಿಯಾಗಿದ್ದ ಜಗದೀಶ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಕೊಡಿಗೇಹಳ್ಳಿ ಬಳಿ ಶುಕ್ರವಾರ ನಡೆದ ಗಲಾಟೆ ಪ್ರಕರಣದಲ್ಲಿ ಪೊಲೀಸರು ಜಗದೀಶ್, ಜಗದೀಶ್, ಅವರ ಮಗ ಆರ್ಯನ್ ಹಾಗೂ ಇಬ್ಬರು ಗನ್ ಮ್ಯಾನ್ ಗಳನ್ನು ಪೊಲೀಸರು ಬಂಧಿಸಿದ್ದಾರೆ.
ಶುಕ್ರವಾರ ಗಲಾಟೆ ಸಂದರ್ಭದಲ್ಲಿ ಗನ್ಮ್ಯಾನ್ ಕಾನೂನು ಬಾಹಿರವಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ತೇಜಸ್ ಎಂಬುವರು ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಜಗದೀಶ್ ಸಹಿತ ಹಲವರನ್ನು ಬಂಧಿಸಿದ್ದಾರೆ.