‘ಬಿಗ್ ಬಾಸ್ ಕನ್ನಡ’ ಸ್ಪರ್ಧಿಯಾಗಿದ್ಫ್ದ ಜಗದೀಶ್ ಮೇಲೆ ಮಾರಣಾಂತಿಕ ಹಲ್ಲೆಯಾಗಿದೆ. ಜಗದೀಶ್ ಅವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಯುವಕರ ಗುಂಪು ದಾಳಿ ನಡೆಸಿತ್ತು. ಆ ವೀಡಿಯೋ ಇದೀಗ ವೈರಲ್ ಆಗಿದೆ.
View this post on Instagram
ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ಜಗದೀಶ್ ಅವರಿಗೆ ಸೇರಿದ ಕಾಂಪ್ಲೆಕ್ಸ್ ಬಳಿ ಅಣ್ಣಮ್ಮ ದೇವಿ ವಿಗ್ರಹ ಸ್ಥಾಪನೆ ವಿಚಾರದಲ್ಲಿ ಕೆಲವು ದಿನಗಳ ಹಿಂದೆ ಗಲಾಟೆ ನಡೆದಿತ್ತು. ನಟ ದರ್ಶನ ವಿವಿರುದ್ದದ ಟೀಕೆಯ ವಿಚಾರದಲ್ಲೂ ಜಗದೀಶ್ ಅವರು ನಟನ ಅಭಿಮಾನಿಗಳಿಂದ ಮುನಿಸಿಕೊಂಡಿದ್ದರು.
ಈ ನಡುವೆ, ಜನವರಿ 24ರ ರಾತ್ರಿ ಜಗದೀಶ್ ಕಾರಿನ ಮೇಲೆ ಯುವಕರ ಗುಂಪು ದಾಳಿ ಮಾಡಿದೆ. ದೊಣ್ಣೆಯಿಂದ ಹಲ್ಲೆ ಮಾಡಿದ ಘಟನೆ ಹಾಗೂ ಕಾರನ್ನು ಹಾನಿಗೊಳಿಸಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಉದ್ರಿಕ್ತರನ್ನು ಚದುರಿಸಿದ್ದಾರೆ.