ಬಿಬಿಎಂಪಿ ಚುನಾವಣೆಗೆ ಜೆಡಿಎಸ್ ರಣತಂತ್ರ; ಸಂಘಟನೆಯಲ್ಲಿ ನಿರುತ್ಸಾಹ ಹೊಂದಿರುವವರಿಗೆ ಕೊಕ್

ಬೆಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ನಿರೀಕ್ಷಿತ ಸಾಧನೆ ತೋರುವಲ್ಲಿ ಸಫಲವಾಗದ ಜೆಡಿಎಸ್, ಇದೀಗ ಮುಂಬರುವ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸಿದ್ದತೆ ನಡೆಸುತ್ತಿದೆ. ಈ ಸಂಬಂಧ ಬೆಂಗಳೂರಿನಲ್ಲಿ ನಡೆದ ಜಾತ್ಯತೀತ ಜನತಾ ದಳದ ಸಭೆ ಗಮನಸೆಳೆಯಿತು ‌

ಪಕ್ಷದ ಸಂಘಟನೆ ದೃಷ್ಟಿಯಿಂದ ಬೆಂಗಳೂರು ಮಹಾನಗರದ ಮುಖಂಡರ ಸಭೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನಡೆಸಿದರು.

ಪಕ್ಷ ಸಂಘಟನೆ ಕುರಿತಂತೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಸಂಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಯುವಕರಿಗೆ ಶಕ್ತಿ ತುಂಬು ಕೆಲಸ ಮಾಡುತ್ತಿದ್ದೇನೆ. ಪಕ್ಷ ಸಂಘಟನೆಯಲ್ಲಿ ಭಾಗಿಯಾಗದವರನ್ನು ಪಕ್ಷದಿಂದ ತೆಗೆಯುತ್ತೇವೆ. ಅರ್ಹತೆ ಆಧಾರ ಮತ್ತು ಸಮುದಾಯದ ಆಧಾರದ ಮೇಲೆ ನಾನು ಅಧಿಕಾರ ಹೊಣೆಗಾರಿಕೆ ಕೊಡುತ್ತೇವೆ ಎಂದರು.

ಮುಂದಿನ ಬಿಬಿಎಂಪಿ ಚುನಾವಣೆಗೆ ಪಕ್ಷವನ್ನು ಸಜ್ಜು ಮಾಡಲಾಗುತ್ತಿದೆ. ಆ ನಿಟ್ಟಿನಲ್ಲಿ ಮುಖಂಡರ ಜತೆ ಸುದೀರ್ಘ ಸಮಾಲೋಚನೆ ನಡೆಸಲಾಗಿದೆ ಎಂದು ಅವರು ಹೇಳಿದರು.

ಮಾಜಿ ಸಚಿವ ಬಂಡೆಪ್ಪ ಕಾಶೇಂಪೂರ್, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ, ಯಶವಂತಪುರದ ಅಭ್ಯರ್ಥಿ ಜವರಾಯಿ ಗೌಡ ಸೇರಿದಂತೆ ಬೆಂಗಳೂರು ನಗರದ ಅನೇಕ ಮುಖಂಡರು ಈ ಸಂದರ್ಭದಲ್ಲಿ ಭಾಗಿಯಾಗಿದ್ದರು.

Related posts