ಬೆಂಗಳೂರು: ಬೆಂಗಳೂರು ಅರಮನೆ ಮೈದಾನದ ಜಾಗ ಸರ್ಕಾರದ ಬಳಕೆಗೆ ಸುಗ್ರಿವಾಜ್ಞೆ ಹೊರಡಿಸಲು ಸರ್ಕಾರ ತೀರ್ಮಾನಿಸಿದೆ. ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದ್ದು, ಈ ಕುರಿತಂತೆ ಸಿದ್ದರಾಮಯ್ಯ ಅವರು ಮಾಹಿತಿ ಹಂಚಿಕೊಂಡಿದ್ದಾರೆ.
ಬೆಂಗಳೂರು ಅರಮನೆ (ಆರ್ಜನೆ ಮತ್ತು ವರ್ಗಾವಣೆ) ಅಧಿನಿಯಮ, 1996ಕ್ಕೆ ಸಂಬಂಧಪಟ್ಟ ಸಿವಿಲ್ ಅಪೀಲುಗಳು ಸರ್ವೋಚ್ಛ ನ್ಯಾಯಾಲಯದಲ್ಲಿ ಬಾಕಿಯಿರುವ ಹಿನ್ನೆಲೆಯಲ್ಲಿ ಅಭಿವೃದ್ಧಿ ಹಕ್ಕುಗಳನ್ನು (ಟಿ.ಡಿ.ಆರ್) ವಿತರಿಸಿದ್ದಲ್ಲಿ ರಾಜ್ಯದ ಹಿತಾಸಕ್ತಿಯ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತದೆ. ಅದಕ್ಕಾಗಿ ಬೆಂಗಳೂರು ಅರಮನೆ ಮೈದಾನದ ಜಾಗವನ್ನು ಬಳಸಿಕೊಳ್ಳಲು ಮತ್ತು ನಿಯಂತ್ರಿಸಲು ಸುಗ್ರಿವಾಜ್ಞೆ ಹೊರಡಿಸಲು ಇಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಯಿತು ಎಂದವರು ತಿಳಿಸಿದ್ದಾರೆ.