ಬೆಂಗಳೂರು–ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲು

ಬೆಂಗಳೂರು: ಬೆಂಗಳೂರು–ಮುಂಬೈ ನಡುವೆ ಸೂಪರ್‌ಫಾಸ್ಟ್ ರೈಲು ಸಂಚಾರಕ್ಕೆ ಕೇಂದ್ರ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ.

ಮೂರು ದಶಕಗಳಿಂದ ಬಾಕಿ ಉಳಿದ ಬೇಡಿಕೆ ಈಡೇರಿದಂತಾಗಿದ್ದು, ಈಗಾಗಲೇ ಉದ್ಯಾನ ಎಕ್ಸ್‌ಪ್ರೆಸ್ ಒಂದೇ ರೈಲು ಕಾರ್ಯನಿರ್ವಹಿಸುತ್ತಿತ್ತು. ಹೊಸ ಸೇವೆಯಿಂದ ಲಕ್ಷಾಂತರ ಪ್ರಯಾಣಿಕರಿಗೆ ಕಡಿಮೆ ವೆಚ್ಚದಲ್ಲಿ ಸುಗಮ ಸಂಚಾರ ಸಿಗಲಿದೆ ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ. ಈ ನಿರ್ಧಾರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಧನ್ಯವಾದ ಅರ್ಪಿಸಿರುವ ತೇಜಸ್ವಿ, ರಾಜ್ಯ ರೈಲ್ವೆ ಸಚಿವ ವಿ.ಸೋಮಣ್ಣರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.

Related posts