ಮಣಿಪುರ ಹಿಂಸಾಚಾರ; ರಾಷ್ಟ್ರಪತಿ ಮಧ್ಯಪ್ರವೇಶಕ್ಕೆ ‘ಇಂಡಿಯ’ ಮನವಿ

ನವದೆಹಲಿ: ಮಣಿಪುರ ಹಿಂಸಾಚಾರ ಘಟನೆ ಬಗ್ಗೆ ಮಧ್ಯಪ್ರವೇಶಿಸುವಂತೆ ಪ್ರತಿಪಕ್ಷ ಕಾಂಗ್ರೆಸ್ ನೇತೃತ್ವದ ಒಕ್ಕೂಟ ‘ಇಂಡಿಯ’ ರಾಷ್ಟ್ರಪತಿಯನ್ನು ಆಗ್ರಹಿಸಿದೆ.

ವಿಪಕ್ಷಗಳ ಮೈತ್ರಿ ಕೂಟ ‘ಇಂಡಿಯಾ’ದ ಸಂಸದರು ಮತ್ತು ಹಲವು ನಾಯಕರು ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಮಣಿಪುರ ಹಿಂಸಾಚಾರ ಕುರಿತು ಗಮನಸೆಳೆದರು.‌

ಬಿಜೆಪಿ ಆಡಳಿತವಿರುವ ಈಶಾನ್ಯ ರಾಜ್ಯದಲ್ಲಿ ಹಿಂಸಾಚಾರ ಅವ್ಯಾಹತವಾಗಿ ಮುಂದುವರಿದಿದೆ, ಈ ಬಗ್ಗೆ ಪ್ರಧಾನಿ ಗಮನಹರಿಸುತ್ತಿಲ್ಲ ಎಂದು ದೂರಿದ ಈ ನಾಯಕರು, ಈ ವಿಚಾರದಲ್ಲಿ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ, ಶಾಂತಿ ಮರುಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ ಮಣಿಪುರ ರಾಜ್ಯದಲ್ಲಿ ಮಹಿಳೆಯ ಮೇಲೆ ನಡೆದ ಘೋರ ದಾಳಿಯನ್ನು ಸರಿಪಡಿಸಬೇಕಿದೆ. ಹಾಗಾಗಿ ದೌರ್ಜನ್ಯಕ್ಕೊಳಗಾದ ಸಮುದಾಯಗಳ ಇಬ್ಬರು ಮಣಿಪುರ ಮಹಿಳೆಯರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡುವಂತೆ ದ್ರೌಪದಿ ಮುರ್ಮು ಅವರಗೆ ಮನವಿ ಮಾಡಿದರು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಜೆಡಿಯು ನಾಯಕ ರಾಜೀವ್ ರಂಜನ್. ತೃಣಮೂಲ ನಾಯಕರಾದ ಸುದೀಪ್ ಬಂಡೋಪಾಧ್ಯಾಯ, ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ, ಶಿವಸೇನಾ (ಯುಬಿಟಿ) ಮುಖಂಡ ಅರವಿಂದ್ ಸಾವಂತ್, ಸಂಜಯ್ ರಾವುತ್ ಸೇರಿದಂತೆ ಇತರೆ ವಿವಿಧ ಪಕ್ಷಗಳ ನಾಯಕರು ಈ ನಿಯೋಗದಲ್ಲಿದ್ದರು.

Related posts