ಮಹಾರಾಷ್ಟ್ರಕ್ಕೆ ಅಪ್ಪಳಿಸಿದ ನಿಸರ್ಗ ಚಂಡಮಾರುತ

ಮುಂಬೈ: ಪೂರ್ವ ಕರಾವಳಿಗೆ ಅಪ್ಪಳಿಸಿರುವ ನಿಸರ್ಗ ಚಂಡಮಾರುತದಿಂದ ಮಹಾರಾಷ್ಟ್ರ ಕರಾವಳಿಯಲ್ಲಿ ಭೀತಿ ಸೃಷ್ಟಿಯಾಗಿದೆ. ಮಹಾರಾಷ್ಟ್ರದ ಹಲವೆಡೆ ಬಿರುಗಾಳಿ ಸಹಿತ ಮಳೆ ಯಾಗುತ್ತಿದೆ. ಬಿರುಗಾಳಿಯ ರಭಸಕ್ಕೆ ಹಲವು ಮನೆಗಳ ಮೇಲ್ಚಾವಣಿಗಳು ಹಾರಿ ಹಾರಿ ಹೋಗಿವೆ. ಹಲವೆಡೆ ಮರಗಳು ರಸ್ತೆಗೆ ಉರುಳಿಬಿದ್ದಿದ್ದು ವಾಹನ ಸಂಚಾರ ಏರುಪೇರಾಗಿದೆ.

ಗುಜರಾತ್ ಕರಾವಳಿ ತೀರ ಪ್ರದೇಶಗಳಲ್ಲಿಯೂ ಭಾರೀ ಮಳೆಯಾಗುತ್ತಿದೆ. ಚಂಡಮಾರುತದ ಅಪಾಯದ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಾವಿರಾರು ಕುಟುಂಬಗಳನ್ನು ಸ್ಥಳಾಂತರ ಮಾಡಲಾಗಿದೆ.

ಇದೇ ವೇಳೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಗುಜರಾತ್ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಸೂಚನೆ ನೀಡಲಾಗಿದೆ.

ಇತ್ತ ಕರ್ನಾಟಕದ ಕರಾವಳಿ ತೀರದಲ್ಲೂ ಭಾರೀ ಮಳೆಯಾಗಿದೆ. ನಿಸರ್ಗ ಚಂಡಮಾರುತದ ಹಿನ್ನೆಲೆಯಲ್ಲಿ ಕರಾವಳಿ ತೀರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

Related posts