ಮಹಿಳೆಯನ್ನು ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಅಧಿಕಾರಿ; ವೀಡಿಯೋ ವೈರಲ್

ಲಕ್ನೋ: ಉತ್ತರ ಪ್ರದೇಶದ ಕುಶಿನಗರದಲ್ಲಿ ಪೊಲೀಸರು ಮಹಿಳೆಯೊಬ್ಬಳ ಕೂದಲು ಹಿಡಿದು ಎಳೆದೊಯ್ದ ಆರೋಪ ಭಾರೀ ವಿವಾದವನ್ನು ಸೃಷ್ಟಿಸಿದೆ.

ತಮ್ಕುಹಿರಾಜ್ ಸಮೀಪ ಬೇಡುಪರ್ ಮುಸ್ತಕಿಲ್ ಗ್ರಾಮದಲ್ಲಿ ಭೂ ವಿವಾದಕ್ಕೆ ಸಂಬಂಧ ಗುಂಪುಗಳ ನಡುವೆ ವಿವಾದ ಉಂಟಾಗಿದೆ. ಕುಟುಂಬಗಳ ನಡುವಿನ ಗಲಾಟೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಧಾವಿಸಿದ ಪೊಲೀಸರು ಮಹಿಳೆಯೊಬ್ಬಳನ್ನು ಕೂದಲು ಹಿಡಿದು ಎಳೆದೊಯ್ದಿದ್ದಾರೆ. ಈ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಹಿಳಾ ಪೊಲೀಸ್ ಅಧಿಕಾರಿ ಇದ್ದರೂ ಕೂಡ ಪುರುಷ ಪೊಲೀಸ್ ಅಧಿಕಾರಿಯು ಮಹಿಳೆಯನ್ನು ಈ ರೀತಿ ಎಳೆದೊಯ್ದ ವರ್ತನೆ ಬಗ್ಗೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

Related posts