ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ; ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯ ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ ಉಚಿತ ಪ್ರಯಾಣದ ‘ಶಕ್ತಿ ಯೋಜನೆ’ ಜಾರಿ ಸಂಬಂಧ ಆದೇಶ ಹೊರಡಿಸಲಾಗಿದೆ.

ಕಾಂಗ್ರೆಸ್ ಪಕ್ಷದ ಚುನಾವಣಾ ಪೂರ್ವ ಭರವಸೆಗಳಾದ ಐದು ‘ಗ್ಯಾರೆಂಟಿ’ ಪೈಕಿ ‘ಶಕ್ತಿ ಯೋಜನೆ’ ಕೂಡಾ ಒಂದು. ಈ ಗ್ಯಾರೆಂಟಿ ಅನುಷ್ಠಾನ ಸಂಬಂಧ ಸೋಮವಾರ ಮಾರ್ಗಸೂಚಿ ಪ್ರಕಟಿಸಲಾಗಿದೆ. ಸೂಚಿಸಲಾಗಿದೆ.

‘ಸ್ಮಾರ್ಟ್ ಕಾರ್ಡ್’ ಸೌಲಭ್ಯ:

ಉಚಿತ ಪ್ರಯಾಣಕ್ಕೆ ಮಹಿಳೆಯರು ‘ಶಕ್ತಿ ಸ್ಮಾರ್ಟ್ ಕಾರ್ಡ್’ಗಳನ್ನು ಪಡೆಯಬೇಕಿದೆ. ಈ ಶಕ್ತಿ ಸ್ಮಾರ್ಟ್ ಕಾರ್ಡ್‌ಗಳನ್ನು ‘ಸೇವಾ ಸಿಂಧು’ ಮೂಲಕ ಅರ್ಜಿ ಹಾಕಿ ಪಡೆಯಬೇಕು. ಈ‌ ಕಾರ್ಡ್‌ಗಳನ್ನು ಮುಂದಿನ ಮೂರು ತಿಂಗಳು ಕಾಲ ಅವಕಾಶವಿದೆ ಎಂದು ಸರ್ಕಾರ ತಿಳಿಸಿದೆ.

‘ಶಕ್ತಿ ಸ್ಮಾರ್ಟ್ ಕಾರ್ಡ್’ ಪಡೆಯುವವರೆಗೆ ಸರ್ಕಾರಗಳು ವಿತರಿಸಿರುವ ಭಾವಚಿತ್ರ ಹಾಗೂ ವಾಸದ ವಿಳಾಸ ಹೊಂದಿರುವ ಗುರುತಿನ ಚೀಟಿಗಳನ್ನು ಪರಿಗಣಿಸಲಾಗುತ್ತದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.‌

‘ಶಕ್ತಿ’ ನಿಯಮಗಳು ಹೀಗಿವೆ:

  • ಶಕ್ತಿ ಸ್ಮಾರ್ಟ್ ಕಾರ್ಡ್’ ಇದ್ದರೂ ಈ ಯೋಜನೆಯು ರಾಜ್ಯದೊಳಗಿನ ಪ್ರಯಾಣಕ್ಕೆ ಮಾತ್ರ ಅನ್ವಯ

  • ಐಷಾರಾಮಿ ಬಸ್ ಗಳಾದ ರಾಜಹಂಸ, ನಾನ್ ಎ.ಸಿ ಸ್ಲೀಪರ್, ವಾಯುವಜ್ರ, ಐರಾವತ, ಐರಾವತ ಕ್ಲಬ್ ಕ್ಲಾಸ್, ಐರಾವತ ಗೋಲ್ಡ್ ಕ್ಲಾಸ್, ಅಂಬಾರಿ, ಅಂಬಾರಿ ಡ್ರೀಮ್ ಕ್ಲಾಸ್, ಅಂಬಾರಿ ಉತ್ಸವ್, ಫ್ಲೈ ಬಸ್, ಇವಿ ಪವರ್ ಪ್ಲಸ್ ಬಸ್ ಸಹಿತ ಲಗ್ಸೂರಿ ಬಸ್‌ಗಳಲ್ಲಿ ಉಚಿತ ಪ್ರಯಾಣಾವಕಾಶ ಇಲ್ಲ.

  • ಬಿಎಂಟಿಸಿ ಹೊರತುಪಡಿಸಿ ಉಚಿತ ಪ್ರಯಾಣ ಸೌಲಭ್ಯವಿರುವ ಸಾರಿಗೆ ಬಸ್‌ಗಳಲ್ಲಿ ಶೇ.50ರಷ್ಟು ಆಸನಗಳನ್ನು ಪುರುಷರಿಗೆ ಕಾಯ್ದಿರಿಸಬೇಕು.

Related posts