ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಡೆಂಗ್ಯೂ ಹಾವಳಿ ಮತ್ತೆ ಭೀತಿಯ ಏಲ್ ಎಬ್ಬಿಡಿದೆ. ಅಕಾಲಿಕ ಮಳೆಮಳೆಯಿಂದಾಗಿ ಸೊಳ್ಳೆಗಳ ಹಾವಳಿ ಹೆಚ್ಚಾಗಿದ್ದು ಡೆಂಗ್ಯೂ ಸೋಂಕಿನ ಪ್ರಮಾಣವೂ ಹೆಚ್ಚಾಗಿದೆ ಎಂದು ವೈದ್ಯರು ಹೇಳಿದ್ದಾರೆ.
ಈ ನಡುವೆ ಈ ವರ್ಷಾರಂಭದ ಕೆಲವು ತಿಂಗಳಲ್ಲೇ 435 ಮಂದಿಯಲ್ಲಿ ಡೆಂಗ್ಯೂ ದೃಢಪಟ್ಟಿದೆ ಎಂದು ಮೂಲಗಳು ತಿಳಿಸಿವೆ. ಬೇಸಿಗೆ ಹಾಗೂ ಮುಂಗಾರು ಪೂರ್ವ ಮಳೆ ಹಿನ್ನೆಲೆಯಲ್ಲಿ ಜ್ವರ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸುಮಾರು 2,300ಕ್ಕೂ ಹೆಚ್ಚು ಮಂದಿಯ ರಕ್ತ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ 435 ಮಂದಿಯಲ್ಲಿ ಡೆಂಗ್ಯೂ ದೃಢಪಟ್ಟಿದೆ ಎಂದು ಮೂಲಗಳು ತಿಳಿಸಿವೆ.
ಮುಂಗಾರು ಪೂರ್ವ ಮಳೆ ಹಿನ್ನೆಲೆ; ಬೆಂಗಳೂರಿಗೆ ಡೆಂಗ್ಯೂ ಸವಾಲು
