ಮೆಕ್ಕಾದಿಂದ ಮದೀನಾಗೆ ತೆರಳುತ್ತಿದ್ದ ಬಸ್ ಅಪಘಾತ; 45 ಭಾರತೀಯರು ದುರ್ಮರಣ

ಸೌದಿ: ಮೆಕ್ಕಾ–ಮದೀನಾ ಮಾರ್ಗದಲ್ಲಿ ಭಾರತೀಯ ಭಕ್ತರನ್ನು ಕರೆದೊಯ್ಯುತ್ತಿದ್ದ ಬಸ್‌ಗೆ ಡೀಸೆಲ್‌ ಟ್ಯಾಂಕರ್‌ ಡಿಕ್ಕಿ ಹೊಡೆದು ಭಾರೀ ದುರಂತ ಸಂಭವಿಸಿದೆ. ಮುಫ್ರಿಹತ್ ಪ್ರದೇಶದಲ್ಲಿ ಭಾರತೀಯ ಕಾಲಮಾನ ಸೋಮವಾರ ಬೆಳಗಿನ ಜಾವ 1.30ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಬಸ್ ಬೆಂಕಿಗೆ ಆಹುತಿಯಾಗಿದೆ.

ಮೆಕ್ಕಾದಿಂದ ಮದೀನಾಗೆ ತೆರಳುತ್ತಿದ್ದ ಬಸ್ಸಿನಲ್ಲಿ ಸುಮಾರು 20 ಮಹಿಳೆಯರು, 11 ಮಕ್ಕಳು ಸೇರಿದಂತೆ ಒಟ್ಟು 45 ಉಮ್ರಾ ಯಾತ್ರಿಕರು ಪ್ರಯಾಣಿಸುತ್ತಿದ್ದರು. ಡೀಸೆಲ್‌ ಟ್ಯಾಂಕರ್‌ಗೆ ಬಸ್ ಡಿಕ್ಕಿ ಹೊಡೆದ ತಕ್ಷಣವೇ ಬೆಂಕಿ ಹೊತ್ತಿಕೊಂಡಿದೆ. ತಕ್ಷಣವೇ ಜ್ವಾಲೆಗಳು ಬಸ್‌ನ್ನು ಆವರಿಸಿದ್ದು, ಒಳಗಿದ್ದವರು ತಪ್ಪಿಸಿಕೊಳ್ಳುವ ಅವಕಾಶವೇ ದೊರೆತಿಲ್ಲ. ಎಲ್ಲಾ 45 ಯಾತ್ರಿಕರೂ ಸಜೀವದಹನವಾದರೆಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.

ಮೃತರೆಲ್ಲರೂ ಹೈದರಾಬಾದ್ ಮೂಲದವರಾಗಿರುವ ಮಾಹಿತಿ ಲಭ್ಯವಾಗಿದೆ. ಈ ಭೀಕರ ದುರಂತದಲ್ಲಿ ಒಬ್ಬ ಯುವಕ ಮಾತ್ರ ಬದುಕುಳಿದಿದ್ದಾನೆ ಎನ್ನಲಾಗಿದೆ.

Related posts