ಯತ್ನಾಳ್-ರೇಣುಕಾಚಾರ್ಯ ವಾಕ್ಸಮರ; ಬಿಜೆಪಿ‌ ನಾಯಕರಿಗೆ ನೊಟೀಸ್..

ಬೆಂಗಳೂರು: ಚುನಾವಣೆಯಲ್ಲಿ ಸೋಲುಂಡಿರುವ ಬಿಜೆಪಿಯಲ್ಲೀಗ ಆರೋಪ ಪ್ರತ್ಯಾರೋಪಗಳು ತಾರಕಕ್ಕೇರಿದೆ. ಅದರಲ್ಲೂ ನಾಯಕರಾದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಮಾಜಿ ಶಾಸಕ ರೇಣುಕಾಚಾರ್ಯ ನಡುವಿನ ವಾಕ್ಸಮರ ಬಿಜೆಪಿ ನಾಯಕರನ್ನು ಮುಜುಗರಕ್ಕೀಡು ಮಾಡಿದೆ.

ನಾಯಕರ ವಾಕ್ಸಮರ ಬಗ್ಗೆ ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ರಾಜ್ಯ ಶಿಸ್ತು ಸಮಿತಿಯು ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಸಹಿತ ಕೆಲವರಿಗೆ ನೋಟಿಸ್ ನೀಡಿದೆ.

ಬಹಿರಂಗ ಹೇಳಿಕೆ ನೀಡದಂತೆ ಸೂಚಿಸಿರುವ ವರಿಷ್ಠರು, ತಮ್ಮ ಮೇಲೆ ಯಾಕೆ ಶಿಸ್ತು ಕ್ರಮ ಜರುಗಿಸಬಾರದೆಂದು ಕಾರಣ ಕೇಳಿದ್ದಾರೆ ಎನ್ನಲಾಗಿದೆ.

Related posts