ರಾಜ್ಯದಲ್ಲಿ ಮುಂಗಾರು ಚುರುಕು; ಕರಾವಳಿ ಮಲೆನಾಡಿನಲ್ಲಿ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕಾಗುತ್ತಿದ್ದು ಮುಂದಿನ ನಾಲ್ಕೈದು ದಿನ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.

ಕರ್ನಾಟಕದ 4 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ರೆಡ್ ಅಲರ್ಟ್​ ಘೋಷಿಸಲಾಗಿದೆ.

ಜುಲೈ 6 ರಂದು ಕರಾವಳಿ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೊಷಿಸಲಾಗಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಾಮರಾಜನಗರ, ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.
ತುಮಕೂರು, ಧಾರವಾಡ, ಹಾವೇರಿ, ಬಳ್ಳಾರಿ, ಬೆಳಗಾವಿ ಜಿಲ್ಲೆಗಳಲ್ಲ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Related posts