ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಜೂ.​​22 ರಂದು ಕರ್ನಾಟಕ ಬಂದ್​​ಗೆ ಕರೆ

ಬೆಂಗಳೂರು: ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇದೀಗ ಆರಂಭಿಕ ಆಘಾತವಾಗಿದೆ. ಅಚ್ಚರಿಯ ಬೆಳವಣಿಗೆಯಲ್ಲಿ ಕೈಗಾರಿಕೋದ್ಯಮಿಗಳು ಕರ್ನಾಟಕ ಬಂದ್ ಕರೆ ನೀಡುವ ಮೂಲಕ‌ ಸಿದ್ದರಾಮಯ್ಯ ಸರ್ಕಾರದ ವಿರುದ್ದ ಸಮರ ಸಾರಿದ್ದಾರೆ.

ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ (KCC&I) ಜೂನ್​​ 22 ರಂದು ಕರ್ನಾಟಕ ಬಂದ್​​ಗೆ ಕರೆ ನೀಡಿದೆ. ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಕೈಗಾರಿಕೋದ್ಯಮಿಗಳು,  ವಿದ್ಯುತ್ ದರ ಏರಿಕೆಯನ್ನು ಹಿಂಪಡೆಯುವಂತೆ ಜೂ.10 ರಂದು ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಬಗ್ಗೆ ತೀರ್ಮಾನ ಕೈಗೊಳ್ಳುವಂತೆ ಸರ್ಕಾರಕ್ಕೆ ಕೆಸಿಸಿಐ ಒಂದು ವಾರಗಳ ಗಡುವು ವಿಧಿಸಿತ್ತು. ದರ ಏರಿಕೆ ಆದೇಶವನ್ನು ಹಿಂಪಡೆಯದಿದ್ದಲ್ಲಿ ಎಲ್ಲಾ ಕೈಗಾರಿಕೆಗಳನ್ನೂ ಬಂದ್ ಮಾಡಿ ಪ್ರತಿಭಟನೆಯ ಎಚ್ಚರಿಕೆಯನ್ನೂ ನೀಡಿತ್ತು.

ಈ ಎಚ್ಚರಿಕೆಗೆ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ರಾಜ್ಯ ಬಂದ್‌ಗೆ ಕರೆ ನೀಡಲಾಗಿದೆ ಎಂದು KCC&I ಪ್ರಮುಖರು ತಿಳಿಸಿದ್ದಾರೆ.

Related posts