ಶ್ರೀ ಘಾಟಿ ಸಮೀಪ ಮದುವೆ ಬಸ್ ಪಲ್ಟಿ: ಅನೇಕ ಪ್ರಯಾಣಿಕರಿಗೆ ಗಾಯ

ದೊಡ್ಡಬಳ್ಳಾಪುರ: ಪುಣ್ಯಕ್ಷೇತ್ರ  ಶ್ರೀ ಘಾಟಿ ಸಮೀಪ ಮದುವೆಗೆ ದಿಬ್ಬಣ ತೆರಳುತ್ತಿದ್ದವರ ಬಸ್ ಪಲ್ಟಿಯಾಗಿ ಅನೇಕರು ಗಾಯಗೊಂಡಿದ್ದಾರೆ.

ಮದುವೆಗೆಂದು ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಆಕಸ್ಮಿಕವಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎನ್ನಲಾಗಿದೆ.

ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Related posts