ಸಂದರ್ಭ ಬಂದಾಗ ಸಂಪುಟ ವಿಸ್ತರಣೆ ಆಗುತ್ತದೆ: ಡಿಕೆಶಿ

ದೆಹಲಿ: ರಾಜ್ಯ ಸಂಪುಟ ವಿಸ್ತರಣೆಯು ಸಂದರ್ಭ ಬಂದಾಗ ಆಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ ಸಂಪುಟ ಪುನಾರಚನೆ ಕುರಿತಂತೆ ಡಿ.ಕೆ.ಶಿ. ಪ್ರತಿಕ್ರಿಯಿಸಿದರು.

ಸಂಪುಟ ವಿಸ್ತರಣೆಯ ಬಗ್ಗೆ ಪತ್ರಕರ್ತರು ಕೇಳಿದಾಗ, “ಸಂಪುಟ ವಿಸ್ತರಣೆಯ ಸಂದರ್ಭ ಬಂದಾಗ ಆಗುತ್ತದೆ. ಈಗ ಆ ಸಂದರ್ಭ ಒದಗಿ ಬಂದಿಲ್ಲವಲ್ಲ. ಒಂದು ಸಚಿವ ಸ್ಥಾನ ಖಾಲಿ ಇದ್ದು ಅದನ್ನು ತುಂಬುವ ಬಗ್ಗೆ ಚರ್ಚೆ ನಡೆದಿಲ್ಲ” ಎಂದು ಡಿಕೆಶಿ ತಿಳಿಸಿದರು.

Related posts