ಬೆಳಗಾವಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದ ಕೇಸ್ಗಳು ಹಿಂಪಡೆಯುವ ಪ್ರಸ್ತಾಪ ರಾಜ್ಯ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದ ಕೇಸ್ಗಳು ಹಿಂಪಡೆಯುವ ವಿಚಾರ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದೇ ವೇಳೆ, ಗೃಹ ಇಲಾಖೆಗೆ ಡಿಸಿಎಂ ಪತ್ರ ಬರೆದ ಬಗ್ಗೆ ಬೆಳಗಾವಿ ಏರ್ಪೋರ್ಟ್ನಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಪ್ರಕರಣಗಳು ಹಿಂಪಡೆಯುವ ಯಾವುದೇ ಪ್ರಸ್ತಾವನೆ ನಮ್ಮ ಮುಂದೆ ಇಲ್ಲ ಎಂದಿದ್ದಾರೆ.
ವಕೀಲರು ಹಾಗೂ ಹೋರಾಟಗಾರರು ಒಂದು ಪತ್ರ ಬರೆದಿದ್ದಾರೆ. ಅದರ ಮೇಲೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪತ್ರ ಬರೆದಿದ್ದಾರೆ ಎಂದ ಸಿಎಂ, ಯಾವುದೇ ಕೇಸ್ ಹಿಂಪಡೆಯುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ತಿಳಿಸಿದರು.