ಬೆಂಗಳೂರು: ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಬಂಧಿತರಾದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಅವರನ್ನು ಒಂಬತ್ತು ದಿನಗಳ ಕಾಲ ಜಾರಿ ನಿರ್ದೇಶನಾಲಯ (ಇಡಿ) ವಶಕ್ಕೆ ಪಡೆದಿದೆ.
ಹಣ ವರ್ಗಾವಣೆ ಮತ್ತು ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿರುವ ಆರೋಪ ಹಿನ್ನೆಲೆಯಲ್ಲಿ ಮಂಗಳವಾರ ಇಡಿ ಅಧಿಕಾರಿಗಳು ದಿನೇಶ್ ಕುಮಾರ್ ಅವರನ್ನು ಬಂಧಿಸಿದ್ದರು. ವಿಚಾರಣೆ ನಂತರ ರಾತ್ರಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ, ಒಂದು ದಿನ ಕಸ್ಟಡಿಗೆ ಪಡೆದಿದ್ದ ಇಡಿ, ಬುಧವಾರ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಿತು. ಹೆಚ್ಚಿನ ವಿಚಾರಣೆ ಅಗತ್ಯವಿರುವ ಹಿನ್ನೆಲೆಯಲ್ಲಿ ಮತ್ತಷ್ಟು ದಿನ ತಮ್ಮ ವಶಕ್ಕೆ ಒಪ್ಪಿಸುವಂತೆ ಇಡಿ ಮನವಿ ಮಾಡಿತು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಆದೇಶ ಮಾಡಿದೆ.