ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಆಯ್ಕೆ

ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಆಯ್ಕೆಯಾಗಿದ್ದಾರೆ.

ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ವೀರಶೈವ ಲಿಂಗಾಯತ ಮಹಾಸಭಾದ ಮಹಾ ಪ್ರಧಾನ ಕಾರ್ಯದರ್ಶಿಯಾಗಿರುವ ಈಶ್ವರ ಬಿ ಖಂಡ್ರೆ ಅವರನ್ನು ಆಯ್ಕೆ ಮಾಡಲಾಗಿದೆ.

ಮಂಗಳವಾರ ಬೆಂಗಳೂರಿನಲ್ಲಿ ನಡೆದ ಸಭಾದ ಕಾರ್ಯಕಾರಿಣಿ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು ಎಂದು ಸಭಾದ ರಾಜ್ಯಾಧ್ಯಕ್ಷ ಶಂಕರ ಎಂ ಬಿದರಿ ಅವರು ತಿಳಿಸಿದ್ದಾರೆ.

Related posts