ಬಸವಕಲ್ಯಾಣ: ರಾಜ್ಯದ ವಿವಿಧ ಭಾಗಗಳಲ್ಲಿ ಅತಿವೃಷ್ಟಿಯಿಂದ ಬೆಳೆ ನಾಶವಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ರಾಜ್ಯ ಸರ್ಕಾರ ಜಾತಿ ಸಮೀಕ್ಷೆ ಹಾಗೂ ರಾಜಕೀಯ ವಿಚಾರಗಳಲ್ಲಿ ಕೇಂದ್ರೀಕೃತವಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಈ ನಡುವೆ ಭಾನುವಾರ ಬಸವಕಲ್ಯಾಣದಲ್ಲಿ ಸಂತ್ರಸ್ತ ರೈತರು ಹಾಗೂ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದಿಂದ ತಕ್ಷಣದ ಬೆಳೆ ಪರಿಹಾರ ನೀಡುವಂತೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಕೆಲವರು ಅರೆಬೆತ್ತಲೆ ತೊಡಗಿಸಿಕೊಂಡು ಸರ್ಕಾರದ ನಿರ್ಲಕ್ಷ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಶಾಸಕ ಶರಣು ಸಲಗಾರ್, ಬಿಜೆಪಿ ಜಿಲ್ಲಾ ಮತ್ತು ರೈತ ಮೋರ್ಚಾ ಪದಾಧಿಕಾರಿಗಳು, ರೈತ ನಾಯಕರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.