ಬೆಂಗಳೂರು ತಮ್ಮ ಕ್ಷೇತ್ರಕ್ಕೆ ಅನುದಾನ ಬಿಡುಗಡೆಗೆ ಸಚಿವ ಎಂ ಟಿ ಬಿ ನಾಗರಾಜ್ ತಡೆಯೊಡ್ಡಿದ್ದಾರೆಂದು ಆರೋಪಿಸಿ, ಅವರ ಸೇಡಿನ ಕ್ರಮ ಪ್ರತಿಭಟಿಸಿ ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಬಳಿ ಗುರುವಾರ ರಾತ್ರಿ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಪ್ರತಿಭಟನೆ ನಡೆಸಿದರು. ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಭೇಟಿ ಮಾಡಿ ಬೆಂಬಲ ವ್ಯಕ್ತಪಡಿಸಿದರು.
ಅನುದಾನ ಅಡ್ಡಿ ಆರೋಪ; ಸಚಿವ ಎಂಟಿಬಿ ವಿರುದ್ದ ವಿಧಾನಸೌಧ ಗಾಂಧಿ ಪ್ರತಿಮೆ ಬಳಿ ಡಿಕೆಶಿ ಜೊತೆ ಶರತ್ ಪ್ರತಿಭಟನೆ
