ಅನ್ನಭಾಗ್ಯಕ್ಕಾಗಿ ಅಕ್ಕಿ ಹುಡುಕಾಟ; ಛತ್ತೀಸ್‌ಗಡದಲ್ಲಿ1.5 ಲಕ್ಷ ಮೆ.ಟನ್ ಲಭ್ಯ 

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಛತ್ತೀಸ್ ಗಡ ರಾಜ್ಯದಲ್ಲಿ 1.50 ಲಕ್ಷ ಮೆ. ಟನ್ ಅಕ್ಕಿ ಲಭ್ಯವಿದೆ. ಆದರೆ ಸಾರಿಗೆ ವೆಚ್ಚ ಹೆಚ್ಚಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ ‌

ಮಾಧ್ಯಮದವರೊಂದಿಗೆ ಮಾಹಿತಿ ಹಂಚಿಕೊಂಡ ಸಿಎಂ, ತೆಲಂಗಾಣದ ಮುಖ್ಯಮಂತ್ರಿಗಳೊಂದಿಗೆ ಖುದ್ದಾಗಿ ಮಾತನಾಡಿದ್ದು, ಅಲ್ಲಿ ಅಕ್ಕಿ ಲಭ್ಯವಿಲ್ಲ ಎಂದು ತಿಳಿಸಿದ್ದಾರೆ ಎಂದರು. ಆಂಧ್ರಪ್ರದೇಶದವರೊಂದಿಗೆ ನಮ್ಮ ಮುಖ್ಯ ಕಾರ್ಯದರ್ಶಿಗಳು ಮಾತನಾಡುತ್ತಿದ್ದಾರೆ ಎಂದರು.

ರಾಜ್ಯದಲ್ಲಿಯೇ ಅಕ್ಕಿ ಲಭ್ಯವಿದೆ. ಕಮಿಷನ್ ಆಮಿಷಕ್ಕೆ ಹೊರರಾಜ್ಯಗಳಿಂದ ಅಕ್ಕಿ ಖರೀದಿಸಲಾಗುತ್ತಿದೆ ಎಂದು ಬಿಜೆಪಿ ಶಾಸಕ ಬಿ.ವೈ.ವಿಜಯೇಂದ್ರ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ, ರಾಜ್ಯದಲ್ಲಿಯೇ ದೊರೆಯುವುದಾದರೆ ಕೊಡಿಸಲಿ ಎಂದರು.

Related posts