ನ್ಯೂಯಾರ್ಕ್: ಅಮೆರಿಕದಲ್ಲಿ ಇನ್ನೂ ಎರಡು ಭಾರತೀಯ ರಾಯಭಾರ ಕಚೇರಿ ತೆರೆಯಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ.
ನ್ಯೂಯಾರ್ಕ್‌ನಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ನಾವು ಬೋಸ್ಟನ್ ಮತ್ತು ಲಾಸ್ ಏಂಜಲೀಸ್‌ನಲ್ಲಿ ಎರಡು ಹೊಸ ರಾಯಭಾರ ಕಚೇರಿಗಳನ್ನು ತೆರೆಯುವ ಬಗ್ಗೆ ಸಲಹೆಗಳನ್ನು ಕೋರಿದ್ದೇವೆ. ಸಲಹೆಯ ನಂತರ ಭಾರತವು ಹೊಸ ಕಾನ್ಸುಲೇಟ್‌ಗಳನ್ನು ತೆರೆಯಲು ನಿರ್ಧರಿಸಿದೆ ಎಂದು ತಿಳಿಸಿದರು.
ಜಗತ್ತಿನಲ್ಲಿ AI ಕ್ರಾಂತಿ ಬಗ್ಗೆ ತಮ್ಮದೇ ದಾಟಿಯಲ್ಲಿ ವಿಶ್ಲೇಷಣೆ ಮಾಡಿದ ಮೋದಿ AI ಅಂದ್ರೆ ಕೃತಕ ಬುದ್ಧಿಮತ್ತೆ. ಆದರೆ, ನನಗೆ AI ಎಂದರೆ ಅಮೆರಿಕನ್-ಇಂಡಿಯನ್ ಸ್ಪಿರಿಟ್ ಎಂದರು.