ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಮೇಲೆ ಮತ್ತೆ ಗುಂಡಿನ ದಾಳಿ

ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಮೇಲೆ ಮತ್ತೆ ಗುಂಡಿನ ದಾಳಿ ನಡೆದಿದೆ.

ಅಮೆರಿಕದ ಫ್ಲೋರಿಡಾದ ಗಾಲ್ಫ್​ ಕೋರ್ಸ್​ ಬಳಿ ಈ ಘಟನೆ ನಡೆದಿದ್ದು ಡೊನಾಲ್ಡ್ ಟ್ರಂಪ್ ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಫ್ಲೋರಿಡಾದ ವೆಸ್ಟ್ ಪಾಮ್ ಬೀಚ್‌ನಲ್ಲಿರುವ ಟ್ರಂಪ್ ಗಾಲ್ಫ್ ಕೋರ್ಸ್‌ನಲ್ಲಿ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮೇಲೆ ದಾಳಿ ನಡೆದಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಟ್ರಂಪ್ ಪುತ್ರ ಟ್ರಂಪ್ ಜೂನಿಯರ್ ತಿಳಿಸಿದ್ದಾರೆ.

ಭಾನುವಾರ ಫ್ಲೋರಿಡಾದ ಟ್ರಂಪ್ ಇಂಟರ್ನ್ಯಾಷನಲ್ ಗಾಲ್ಫ್ ಕೋರ್ಸ್ ಬಳಿ, ಟ್ರಂಪ್‌ಗೆ ಬಹಳ ಹತ್ತಿರದಲ್ಲಿ ಬುಲೆಟ್‌ಗಳನ್ನು ಹಾರಿಸಲಾಗಿದೆ ಎಂಬುದನ್ನು ಖಚಿತಪಡಿಸಿರುವ ಎಫ್‌ಬಿಐ ಅಧಿಕಾರಿಗಳು, ಟ್ರಂಪ್ ಕೊಲೆಗೆ ಯತ್ನಿಸಿದ ವ್ಯಕ್ತಿಯನ್ನು ಸೆರೆಹಿಡಿದಿದ್ದಾರೆ.

ಡೊನಾಲ್ಡ್ ಟ್ರಂಪ್ ಅವರಿಗೆ ಯಾವುದೇ ಅಪಾಯವಾಗಿಲ್ಲ, ಅವರು ಸಂಪೂರ್ಣ ಸೇಫ್ ಆಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Related posts