ಅಯೋಧ್ಯೆ: ಅಯೋಧ್ಯೆಯಲ್ಲಿರುವ ಶ್ರೀ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ವಿಧಿವಶರಾಗಿದ್ದಾರೆ.
ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಫೆಬ್ರವರಿ 3 ರಂದು ಅವರು ಪಾರ್ಶ್ವವಾಯುವಿಗೆ ಒಳಗಾಗಿದ್ದು ಅನಂತರ ಅವರ ಆರೋಗ್ಯ ಕ್ಷೀಣಿಸಿತ್ತೆನ್ನಲಾಗಿದೆ.
85 ವರ್ಷ ವಯಸ್ಸಿನ ಆಚಾರ್ಯ ಸತ್ಯೇಂದ್ರ ದಾಸ್ ಅವರು, 1992ರ ಡಿಸೆಂಬರ್ 6ರಂದು ಬಾಬರಿ ಮಸೀದಿಯನ್ನು ಕೆಡವಿದಾಗ ತಾತ್ಕಾಲಿಕ ರಾಮ ಮಂದಿರದ ಅರ್ಚಕರಾಗಿದ್ದರು. ಭವ್ಯ ರಾಮ ಮಂದಿರ ನಿರ್ಮಾಣ ನಂತರವೂ ಶ್ರೀರಾಮನ ಕೈಂಕರ್ಯದಲ್ಲಿ ಮುಂಚೂಣಿಯಲ್ಲಿದ್ದರು.