ಇರಾನ್ ಮೇಲೆ ಇಸ್ರೇಲ್ ದಾಳಿ: 224 ನಾಗರಿಕರು ಬಲಿ

ನವದೆಹಲಿ: ಇಸ್ರೇಲ್ ಹಾಗೂ ಪ್ಯಾಲೆಸ್ತೀನ್‌ ನಡುವೆ ಶುರುವಾದ ಹಿಂಸಾತ್ಮಕ ಸಂಘರ್ಷ ಇದೀಗ ಇತರೆ ರಾಷ್ಟ್ರಗಳಿಗೂ ವಿಸ್ತಾರವಾಗಿದ್ದು, ಇಸ್ರೇಲ್ ಇದೀಗ ಇರಾನ್ ವಿರುದ್ಧ ಮಿಲಿಟರಿ ದಾಳಿ ನಡೆಸಿದೆ. ಈ ದಾಳಿಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಕನಿಷ್ಠ 224 ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ. ಸುಮಾರು 1,257 ಮಂದಿ ಗಾಯಗೊಂಡಿರುವುದಾಗಿ ಸ್ಥಳೀಯ ಮೂಲಗಳು ತಿಳಿಸಿವೆ.

ಈ ಘಟನೆಗೆ ಸಂಬಂಧಿಸಿ ಭಾರತದಲ್ಲಿನ ಇರಾನ್ ರಾಯಭಾರ ಕಚೇರಿ ಸ್ಪಂದನೆ ನೀಡಿದ್ದು, ಇಸ್ರೇಲ್ ಈ ದಾಳಿಯ ಮೂಲಕ ಇರಾನ್‌ನ ಪ್ರಾದೇಶಿಕ ಅಖಂಡತೆ ಮತ್ತು ರಾಷ್ಟ್ರೀಯ ಸಾರ್ವಭೌಮತ್ವವನ್ನು ಗಂಭೀರವಾಗಿ ಉಲ್ಲಂಘಿಸಿದೆ ಎಂದು ಆರೋಪಿಸಿದೆ.

ಸಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ, “ಇದೊಂದು ಕಠಿಣ ಉಲ್ಲಂಘನೆ. ಅಂತಾರಾಷ್ಟ್ರೀಯ ನಿಯಮಗಳ ಹಿನ್ನಲೆಯಲ್ಲಿ ಈ ದಾಳಿಯನ್ನು ಖಂಡಿಸಬೇಕು” ಎಂದು ರಾಯಭಾರ ಕಚೇರಿ ತಿಳಿಸಿದೆ.

Related posts